ವ್ಯಕ್ತಿರೂಪ ಹಂಗಿಲ್ಲದ
ಶಕ್ತಿರೂಪ ಚೇತನ-
ನಿನಗೇಕೆ ಹೆಸರು
ಕಲ್ಲಿನ ಕುಸುರು
ವೈಭವದ ಕೆಸರು!
ಯಾಕೆ ಬೇಕು ನಿನಗೆ-
ಪತಾಕೆಗಳ ಹಾವಳಿ
ಗೋಪುರದ ಬಾವಲಿ
ಗುಣುಗುಡುವ ಗಂಟೆ
ಅಂಟುಸ್ನಾನದ ತಂಟೆ!
ನಿನ್ನ ಸಾವಿರಾರು ಸಾವಿರ
ಹೆಸರುಗಳಲ್ಲಿ ನನಗೂ ಒಂದು-
ನಿನ್ನ ತೃಣ ನಾನೆಂಬ ನೆಪಕಾಗಿ
ನಿನ್ನ ಋಣ ನನಗೆಂಬ ನೆನಪಿಗಾಗಿ
ನಿನ್ನ ಘನತೆಯ ಸಣ್ಣ ಕುರುಹಾಗಿ!
(೧೨-ಆಗಸ್ಟ್-೨೦೦೮)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Wednesday, 12 August 2009
Subscribe to:
Post Comments (Atom)
2 comments:
Good!
ಸದಾ ಬೆನ್ನು ತಟ್ಟಿ ಪ್ರೋತ್ಸಾಹಿಸುವ ನಿಮ್ಮ ಪ್ರೀತಿಗೆ ಧನ್ಯವಾದಗಳು, ಕಾಕಾ.
Post a Comment