ಕಾಯೇ ನಮ್ಮನು ಸರಸ್ವತಿ
ಕತ್ತಲ ಹರಿಸಿ ಕೊಡು ನೀ ಸನ್ಮತಿ ||ಪ||
ಹಂಸ ವಾಹಿನಿ, ಸರಸಿಜ ಮೋಹಿನಿ
ಮನಸಿಜನಗ್ರಜನರಸೀ |
ಅಕ್ಷರ ಜನನಿ, ಜ್ಞಾನಪ್ರದಾಯಿನಿ
ಮಂದಹಾಸಿ ಮೃದುಭಾಷೀ ||ಚರಣ-೧||
ಶ್ವೇತವಸನೇ ಶುಕ್ಲಾಭರಣೇ
ಚಂದ್ರ ಕಾಂತಿ ಪ್ರಭಾಸೇ |
ವೀಣಾ ಸ್ಫಟಿಕಮಣಿ ಪುಸ್ತಕ ಪಾಣೀ
ಕಾವ್ಯಗಾಯನ ಪ್ರೀತೇ ||ಚರಣ-೨||
ಹರಸೇ ತಾಯೇ, ಅಂಬುಜಾಸನೇ
ಅಂಬುಜದಳ ನೇತ್ರೇ |
ಸಲಹೇ ತಾಯೇ, ಮಂಗಳದಾಯಿನೀ
ಅಜಪ್ರಿಯೇ ಶುಭ ಗಾತ್ರೇ ||ಚರಣ-೩||
(೫-ಸೆಪ್ಟೆಂಬರ್-೨೦೦೫ - ೪-ಜೂನ್-೨೦೦೮)
ಇನ್ನೊಂದು ಅಕ್ಷರಂಗಳ
"ಸುಪ್ತದೀಪ್ತಿ"ಯ ಕಿಟಕಿ->->->
Saturday, 26 September 2009
Subscribe to:
Post Comments (Atom)
3 comments:
ಜ್ಯೋತಿ,
‘ಚಂದ್ರಕಾಂತಿ ಪ್ರಭಾತೇ’ ಬದಲು ‘ಚಂದ್ರಕಾಂತಿ ಪ್ರಭಾಸೇ’ ಸರಿಯಾಗುತ್ತಿತ್ತೇನೊ?
ಧನ್ಯವಾದಗಳು ಕಾಕಾ. ತಿದ್ದಿದ್ದೇನೆ.
ಧನ್ಯವಾದಗಳು ಸೀತಾರಾಮ್.
Post a Comment